ಜಿಲ್ಲೆಯಾದ್ಯಂತ ಮುಂದುವರಿದ ಮಹಾ ಮಳೆ: ಶಾಲಾ-ಕಾಲೇಜುಗಳಿಗೆ ಇಂದು ರಜೆ.!

ಕೊಡಗು: ಜಿಲ್ಲೆಯಾದ್ಯಂತ ಮಹಾ ಮಳೆ ಮುಂದುವರೆದಿದೆ. ಇದರಿಂದಾಗಿ ಜಿಲ್ಲೆಯ ನಾನಾ ಕಡೆಗಳಲ್ಲಿ ರಸ್ತೆ ಬಂದ್ ಆಗಿದೆ.  ಸಂಚಾರಕ್ಕೆ ತುಂಬಾ ತೊಂದರೆಯಾಗಿರುವುದರಿಂದ ಅಂಗನವಾಡಿ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ‌ ಆದೇಶ ಹೊರಡಿಸಿದ್ದಾರೆ.

ಮುಂದುವರೆದ ಮಹಾ ಮಳೆಗೆ ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದ್ದು, ದೇವಾಲಯದ ಮೆಟ್ಟಿಲಿನವರೆಗೆ ನೀರು ತಲುಪಿದೆ. ಈ ವರ್ಷ ಇದೇ ಮೊದಲ ಬಾರಿಗೆ, ಪ್ರವಾಹದ ಪ್ರಮಾಣ ಹೆಚ್ಚಾಗಿದ್ದು, ಕಳೆದೊಂದು ವಾರದಲ್ಲಿ ಎರಡನೇ ಬಾರಿಗೆ ಅಂಗನವಾಡಿ ಭರ್ತಿಯಾಗಿದೆ. ಇನ್ನೂ ಈ ಭಾಗದ ಜನರನ್ನು ಕೊಂಡೊಯ್ಯಲು ಮೋಟಾರ್ ಬೋಟ್, ಱಫ್ಟರ್ ಬಳಕೆ ಮಾಡಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಭಾಗಮಂಡಲಕ್ಕೆ ತೆರಳುವ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ:contact@firstnews.tv