ಮತ್ತೆ ಆರ್ಭಟಿಸಿದ ವರುಣ

ಕೊಡಗು:  ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರಿದಿದೆ. ಕೆಲಕಾಲ ಬ್ರೇಕ್​ ತೆಗೆದುಕೊಂಡಿದ್ದ ಮಳೆ, ನಿನ್ನೆ ಸಂಜೆಯಿಂದ ಮತ್ತೆ ತನ್ನ ಆರ್ಭಟ ಮುಂದುವರಿಸಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಒಳ ಹರಿವು ಹೆಚ್ಚುತ್ತಿದ್ದು, ಹೀಗೆ ಮಳೆ ಮುಂದುವರಿದರೆ ಸಂಗಮ ಕ್ಷೇತ್ರ ಜಲಾವೃತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಭಾರೀ ಮಳೆ ಹಿನ್ನೆಲೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv