ಗಾಳಿ ಮಳೆಗೆ ತತ್ತರಿಸಿದ ಬಂದರು ನಗರಿ.!

ಮಂಗಳೂರು: ಕರಾವಳಿಯ ಅವಿಭಾಜಿತ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು ಸಮುದ್ರ ತೀರ ಪ್ರದೇಶದ ಜನರು ತತ್ತರಗೊಂಡಿದ್ದಾರೆ.

 

 

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಮಳೆರಾಯನಿಗೆ ಗಾಳಿಯೂ ಸಾಥ್ ನೀಡಿದೆ. ಹೀಗಾಗಿ ಹಲವೆಡೆ ಮರಗಳು ನೆಲಕ್ಕುರುಳಿದ್ದು ಅಲ್ಲಲ್ಲಿ ವಿದ್ಯುತ್ ಕೈಕೊಟ್ಟಿದೆ. ಜೊತೆಗೆ ಗಾಳಿಯ ರಭಸದಿಂದಾಗಿ ಸಮುದ್ರ ತೀರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಾಗಿದೆ. ಕಡಲು ಭೋರ್ಗರೆಯುತ್ತ ದಡಕ್ಕೆ ಅಪ್ಪಳಿಸುತ್ತಿದೆ. ನಿನ್ನೆಯಷ್ಟೇ ಕೇಂದ್ರ ಹವಾಮಾನ ಇಲಾಖೆ ರಾಜ್ಯ ಸರಕಾರಕ್ಕೆ ಪತ್ರ ಬರೆದು ಕರಾವಳಿಯಲ್ಲಿ ಜೂನ್ 12ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಲಾಗಿದೆ. ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಭಾರೀ ಮಳೆಯಾಗುತ್ತಿರುವುದರಿಂದ ಹೊಳೆ, ನದಿಗಳು ತುಂಬಿ ಹರಿಯತೊಡಗಿವೆ.

 

 

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv