ತಗ್ಗು ಪ್ರದೇಶಗಳಲ್ಲಿ ನೆರೆ ನೀರು: ಗರ್ಭಿಣಿಯ ರಕ್ಷಣೆ

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆದಿದ್ದು, ತಗ್ಗು ಪ್ರದೇಶಗಳಲ್ಲಿ ನೆರೆ ನೀರು ಆವರಿಸಿದೆ. ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪುವಿನ ಮನೆಯೊಂದರಲ್ಲಿದ್ದ ಗರ್ಭಿಣಿಯೊಬ್ಬರು ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೋಲಿಸರು ಬೋಟ್ ಮೂಲಕ ಗರ್ಭಿಣಿಯನ್ನು ಹಾಗೂ ಕುಟುಂಬದ ಸದಸ್ಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv