ಮುಳುಗುವ ಭೀತಿಯಲ್ಲಿ ಹೆಬ್ಬಾಳೆ ಸೇತುವೆ..!

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಕಳಸ-ಹೊರನಾಡು-ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೊರನಾಡು ಸಮೀಪದಲ್ಲಿರುವ ಹೆಬ್ಬಾಳೆ ಸೇತುವೆ ಮುಳುಗಡೆ ಆಗುವ ಭೀತಿ ಎದುರಾಗಿದೆ. ಸೇತುವೆ ಮಟ್ಟದಲ್ಲಿ ನೀರು ಹರಿಯುತ್ತಿದ್ದು, ಖಾಸಗಿ ಬಸ್, ಪ್ರವಾಸಿ ವಾಹನಗಳ ಸಂಚಾರ ಎಂದಿನಂತೆ ಆರಂಭವಾಗಿದೆ. ಇನ್ನೂ ಭದ್ರಾ ನದಿಯ ನೀರಿನ ಪ್ರಮಾಣವು ಹೆಚ್ಚಳವಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಳೆ ಹೆಚ್ಚಾದರೆ ನೀರು ಸೇತುವೆ ಮೇಲೆ ಉಕ್ಕಿ ಸಂಪರ್ಕ ಕಡಿತವಾಗುವ ಸಾಧ್ಯತೆ ಹೆಚ್ಚಳವಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv