ಮೈಸೂರಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಹೈಕೋರ್ಟ್​ ಗ್ರೀನ್​ ಸಿಗ್ನಲ್​..!

ಬೆಂಗಳೂರು: ಸಾಹಸ ಸಿಂಹ ದಿವಂಗತ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಹೈಕೋರ್ಟ್​ ಗ್ರೀನ್ ‌ಸಿಗ್ನಲ್ ನೀಡಿದೆ. ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರವಾಗಿ, ಅಧೀನ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಈ ಹಿಂದೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಆದೇಶಿಸಿದೆ. ಈ ಹಿಂದೆ ಜಮೀನು ತಮಗೆ ಸೇರಿದ್ದು ಎಂದು ಮಹದೇವಮ್ಮ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಮೈಸೂರಿನ ಸಿವಿಲ್ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಆಗ ಹೈಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳಲು ಹಿಂದೆ ಆದೇಶಿಸಿತ್ತು.
ಆದ್ರೆ ಈಗ ಹೈಕೋರ್ಟ್ ಮಧ್ಯಂತರ ಆದೇಶವನ್ನು ಹಿಂಪಡೆದಿದೆ. ಸದ್ಯದಲ್ಲೇ ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಲಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv