KPSC ನೇಮಕಾತಿ ಹಗರಣ; ಪರಿಷ್ಕೃತ ಪಟ್ಟಿಯಂತೆ 115 ಅಧಿಕಾರಿಗಳಿಗೆ ಹುದ್ದೆ ನೀಡಲು ಆದೇಶ

ಬೆಂಗಳೂರು: 1998ನೇ ಸಾಲಿನ ಕೆಪಿಎಸ್‌ಸಿ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಪಟ್ಟಿಯಂತೆ 115 ಅಧಿಕಾರಿಗಳಿಗೆ ಕೂಡಲೇ ಹುದ್ದೆ ನೀಡಿ ಅಂತಾ ಹೈಕೋರ್ಟ್​ ಆದೇಶಿಸಿದೆ. ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ KPSC ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಮುಂಬಡ್ತಿ-ಹಿಂಬಡ್ತಿ ಪಡೆದಿರುವ 115 ಅಧಿಕಾರಿಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿ ಅಂತಾ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ಅಧಿಕಾರಿಗಳ ಪೈಕಿ ಕೆಲವರು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ. ಹೀಗಾಗಿ, ಮೇ 23ರ ನಂತರ ಎಲ್ಲರೂ ತಮ್ಮ ಕರ್ತವ್ಯಕ್ಕೆ ಹಾಜರಾಗಬೇಕು. ಉಳಿದ ಅಧಿಕಾರಿಗಳು ಇಲಾಖೆಗಳ ಮುಖ್ಯಸ್ಥರ ಮುಂದೆ ಹಾಜರಾಗಿ, ಕಾನೂನಿನ ಪ್ರಕಾರ ಹುದ್ದೆ ಪಡೆದುಕೊಳ್ಳಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಇದನ್ನೂ ಓದಿ: KPSC ಅಕ್ರಮ; ಏಪ್ರಿಲ್​ 15ಕ್ಕೆ 7 ಐಎಎಸ್​ ಅಧಿಕಾರಿಗಳ ಭವಿಷ್ಯ ನಿರ್ಧಾರ..!


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv