ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭದ್ರತೆ ಬಿಗಿ

ಹುಬ್ಬಳ್ಳಿ: ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ಆತ್ಮಾಹುತಿ ಬಾಂಬ್​ ದಾಳಿಯ ಬಳಿಕ ಭಾರತ ಮತ್ತು ಪಾಕ್​ ನಡುವೆ ಯುದ್ಧದ ಕಾರ್ಮೋಡ ಕವಿದಿದೆ. ಮತ್ತೊಂದೆಡೆ ಕೆಲ ದಿನದ ಹಿಂದೆ ಹುಬ್ಬಳ್ಳಿ ಸ್ಫೋಟಿಸುವುದಾಗಿ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಭದ್ರತೆಗೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಜ್ಯದ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯ ಕಚೇರಿ, ರೈಲ್ವೆ ನಿಲ್ದಾಣ ಹಾಗೂ ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ಭದ್ರತೆ ದೃಷ್ಟಿಯಿಂದ ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಪ್ರವೇಶ ಪಡೆಯುತ್ತಿದ್ದಂತೆ, ಅವರ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸರಕುಗಳನ್ನು ಪ್ರತ್ಯೇಕವಾಗಿ ಪರೀಕ್ಷೆ ಮಾಡಲಾಗುತ್ತಿದೆ. ಈಗಾಗ್ಲೇ ಏರ್‌ಪೋರ್ಟ್‌ನಲ್ಲಿ ತಪಾಸಣೆ ಹಾಗೂ ಭದ್ರತೆಗಾಗಿ ಒಟ್ಟು 90 ಮಂದಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇನ್ನೂ ನೈಋತ್ಯ ರೈಲ್ವೆ ವಲಯ ಕಚೇರಿ ಹಾಗೂ ರೈಲ್ವೆ ನಿಲ್ದಾಣಕ್ಕೆ ರೈಲ್ವೆ ಪೊಲೀಸ್ ಇಲಾಖೆಗೆ ಹೆಚ್ಚಿನ ಭದ್ರತೆ ಒದಗಿಸಿದ್ದು, ಅನುಮಾನಾಸ್ಪದ ವ್ಯಕ್ತಿಗಳ ಮಾಹಿತಿ ಪಡೆಯುವ ಮುಂಜಾಗ್ರತಾ ಕ್ರಮವಾಗಿ ರೈಲ್ವೆ ನಿಲ್ದಾಣದ ಒಳ ಹೋಗುವ ಹಾಗೂ ಹೊರಗೆ ಬರುವ ಪ್ರಯಾಣಿಕರ ಮೇಲೆ ನಿಗಾ ಇಟ್ಟಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv