ಜಯನಗರ ಕ್ಷೇತ್ರದ ವಿಧಾನಸಭಾ ಚುನಾವಣೆ: ಪೊಲೀಸ್​ ಬಿಗಿ ಬಂದೋಬಸ್ತ್​

ಬೆಂಗಳೂರು: ಜಯನಗರ ಕ್ಷೇತ್ರದ ವಿಧಾನಸಭಾ ಚುನಾವಣೆ ಇಂದು ನಡೆಯುತ್ತಿದೆ. ಈ ಹಿನ್ನೆಲೆ, ಜಯನಗರ ಕ್ಷೇತ್ರದಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್ ಮಾಡಲಾಗಿದೆ. ದಕ್ಷಿಣ ವಿಭಾಗ ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

10 ಪ್ಯಾರಾ ಮಿಲಿಟರಿ ತುಕಡಿಗಳು, 350ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ, ಫ್ಲೈಯಿಂಗ್‌ ಸ್ಕ್ವಾಡ್ ಸೇರಿದಂತೆ‌ ದಕ್ಷಿಣ ವಿಭಾಗ ಪೊಲೀಸರಿಂದ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಮತಗಟ್ಟೆಯಲ್ಲೂ ಪ್ಯಾರಾ ಮಿಲಿಟರಿ ಫೋರ್ಸ್ ನಿಯೋಜನೆ ಮಾಡಲಾಗಿದೆ. 45 ಮತಗಟ್ಟೆಗಳನ್ನು ಸೂಕ್ಷ್ಮ ಪ್ರದೇಶವೆಂದು ಘೋಷಿಸಲಾಗಿದೆ. ಒಬ್ಬರು ಡಿಸಿಪಿ, ಇಬ್ಬರು ಎಸಿಪಿ, 10 ಪಿಐ, 15 ಪಿಎಸ್​ಐ ಸೇರಿ 350ಕ್ಕೂ ಹೆಚ್ಚು ಪೊಲೀಸರು ಭದ್ರತಾ ಕಾರ್ಯದಲ್ಲಿ ತೊಡಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯಕುಮಾರ್​ ನಿಧನದಿಂದ ಜಯನಗರ ವಿಧಾನಸಭಾ ಚುನಾವಣೆ ಮುಂದೂಡಲ್ಪಟ್ಟಿತ್ತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv