ಭಾರೀ ಮಳೆಗೆ ಹೆದ್ದಾರಿ ಬಂದ್

ಕೊಡಗು: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿರಾಜಪೇಟೆ- ಮಾಕುಟ್ಟ ಮೂಲಕ ನೆರೆಯ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಭೂ ಕುಸಿತವುಂಟಾಗಿದೆ. ಈ ಕಾರಣದಿಂದಾಗಿ ಜುಲೈ 13ರವರೆಗೆ ವಾಹನ ಸಂಚಾರವನ್ನು ನಿಷೇಧಿಲಾಗಿದೆ.

ಪೆರುಂಬಾಡಿಯಿಂದ ಮಾಕುಟ್ಟದವರೆಗೆ ಸುಮಾರು 25ಕ್ಕೂ ಹೆಚ್ಚು ಭಾಗಗಳಲ್ಲಿ ಗಣನೀಯ ಪ್ರಮಾಣದ ಭೂ ಕುಸಿತ ಉಂಟಾಗಿದ್ದು, ಇದರೊಂದಿಗೆ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದು ಸಾಕಷ್ಟು ಹಾನಿಯಾಗಿದೆ. ಅಡಚಣೆಯನ್ನು ತೆರವುಗೊಳಿಸಲು ಹಾಗೂ ಶೀಘ್ರವಾಗಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸಂಚಾರಕ್ಕೆ ಯೋಗ್ಯವಾದ ರಸ್ತೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವುದಾಗಿ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ. ನಿಷೇಧಿತ ರಸ್ತೆಯ ಬದಲಿಗೆ ಗೋಣಿಕೊಪ್ಪಲು-ಪೊನ್ನಂಪೇಟೆ-ಶ್ರೀಮಂಗಲ-ಕುಟ್ಟ ಮಾರ್ಗವನ್ನು ಬಳಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv