ಯಾರೂ ಇಲ್ಲದ ವೇಳೆ ಮನೆಗೆ ಕನ್ನ

ಉತ್ತರ ಕನ್ನಡ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಕಳ್ಳತನ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನಾರಾಯಣ ಗುರು ನಗರದಲ್ಲಿ ತಡರಾತ್ರಿ ನಡೆದಿದೆ.

ದತ್ತಾ ದೇವಳಮಕ್ಕಿ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿದ ಕಳ್ಳರು, ಚಿನ್ನ, ಬೆಳ್ಳಿ ಕಳ್ಳತನ ಮಾಡಿದ್ದಾರೆ. ದೇವಳಮಕ್ಕಿ ಅವರ ಮೇಲಿನ ಮನೆಯಲ್ಲಿ ಬಾಡಿಗೆ ಇದ್ದ ವ್ಯಕ್ತಿಗಳು ಇಂದು ಬೆಳಗ್ಗೆ ನಾಯಿಗೆ ಅನ್ನ ಹಾಕಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv