ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅರೆಸ್ಟ್​

ದಾವಣಗೆರೆ: ಸಾರ್ವಜನಿಕರಿಗೆ ಸಮರ್ಪಕವಾಗಿ ಮರಳು ಪೂರೈಕೆ ಮಾಡುವುದು ಹಾಗೂ ಹೊನ್ನಾಳಿ, ನ್ಯಾಮ್ತಿ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ಹೊನ್ನಾಳಿ ಬಂದ್​ಗೆ ಕರೆ ನೀಡಿ ರಸ್ತೆ ತಡೆ ನಡೆಸಿ‌‌ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಅವರನ್ನ ಬಂಧಿಸಲಾಗಿದೆ.

ಹೊನ್ನಾಳಿ ಶಾಸಕ ರೇಣುಕಾಚಾರ್ಯ ಇಂದು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹೊನ್ನಾಳಿ ಬಂದ್​ಗೆ ಕರೆ ನೀಡಿದ್ದರು. ಬಂದ್​ ಆಚರಣೆ ವೇಳೆ ರಸ್ತೆ ತಡೆ ನಡೆಸಿ‌‌ ಸಂಚಾರ ಅಸ್ತವ್ಯಸ್ತಗೊಳಿಸಿ ಸಾರ್ವಜನಿಕರಿಗೆ ಕಿರುಕುಳ ನೀಡಿದ್ರು. ರೇಣುಕಾಚಾರ್ಯರ ಈ ಅತೀರೇಕದ ವರ್ತನೆಗೆ ಪೊಲೀಸರು ಹಾಗೂ ಸಾರ್ವಜನಿಕರು ಬೇಸತ್ತು ಹೋದರು. ಕೊನೆಗೆ ಪೊಲೀಸರು, ತಮ್ಮ ಮಾತು ಕೇಳದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಸೇರಿದಂತೆ ಹತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನ ಬಂಧಿಸಿ, ಠಾಣೆಗೆ ಕರೆದೊಯ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv