ನಕಲಿ ಮದ್ಯ ಸೇವಿಸಿ 42 ಮಂದಿ ಸಾವು

ಲಕ್ನೋ: ನಕಲಿ ಮದ್ಯದ ಹಾವಳಿ ಹೆಚ್ಚಾಗಿದ್ದು, ಇದೀಗ ಉತ್ತರಪ್ರದೇಶ ಮತ್ತು ಉತ್ತರಾಖಂಡ್​​​ನಲ್ಲಿ ನಕಲಿ ಮದ್ಯ ಸೇವಿಸಿ ಸುಮಾರು 42 ಜನ ಮೃತರಾಗಿದ್ದಾರೆ. ಉತ್ತರ ಪ್ರದೇಶದ ಶಹರಣ್ ಪುರ್, ಖುಷಿನಗರ್ ಜಿಲ್ಲೆಗಳಲ್ಲಿ ಮತ್ತು ಉತ್ತರಾಖಂಡದ ಹರಿದ್ವಾರದ ರೂರ್ಕಿಯಲ್ಲಿ ಒಟ್ಟು 42 ಜನ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ. ಉತ್ತರಪ್ರದೇಶದ ಶಹರಣ್ ಪುರ್‌ನಲ್ಲಿ 18 ಜನ ಸಾವನ್ನಪ್ಪಿದ್ರೆ, ಖುಷಿನಗರದಲ್ಲಿ 6 ಜನ ಸಾವಿಗೀಡಾಗಿದ್ದಾರೆ. ಇವರಲ್ಲಿ ಅಸ್ವಸ್ಥರಾದ 11 ಮಂದಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ನಕಲಿ ಮದ್ಯ ಸೇವಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ.

ಇನ್ನು ಹರಿದ್ವಾರದಲ್ಲಿ 23 ಮಂದಿ ಮೃತರಾಗಿದ್ದಾರೆ ಎನ್ನಲಾಗ್ತಿದೆ. ಈ ಘಟನೆ ಸಂಬಂಧ ಉತ್ತರಾಖಂಡ್ ಸರ್ಕಾರ, 17 ಮಂದಿ ಅಬಕಾರಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದೆ.

ಇನ್ನು ಉತ್ತರಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್‌, ಮದ್ಯ ದುರಂತದ ಬಗ್ಗೆ ತನಿಖೆ ನಡೆಸಲು ಆದೇಶಿಸಿದ್ದಾರೆ. ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಧನ ಘೋಷಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರಿಗಾಗಿ 50 ಸಾವಿರ ನೀಡೋದಾಗಿ ಸಿಎಂ ಘೋಷಿಸಿದ್ದಾರೆ.


Follow us on:

YouTube: firstNewsKannada  Instagram: firstnews_tv  Face Book: firstnews.tv  Twitter: firstnews_tv