ಜುಲೈ 4 ರಂದು ಜಿಲ್ಲಾ ರೈತ ಬಿಜೆಪಿ ಕಾರ್ಯಕಾರಿಣಿ ಸಭೆ

ಹುಬ್ಬಳ್ಳಿ: ಬಿಜೆಪಿ ಧಾರವಾಡ ಜಿಲ್ಲಾ ರೈತ ಮೋರ್ಚಾ ಘಟಕದ ವತಿಯಿಂದ ಜು 4 ರಂದು ರೈತ ಮೋರ್ಚಾದ ರಾಜಕಾರಿಣಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಅಂತಾ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಬಸಣ್ಣ ಬೆಳವಣಿಕಿ ಅವರು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾರ್ಯಕಾರಣಿ ಸಭೆಯನ್ನು ಹುಬ್ಬಳ್ಳಿಯ ದೇಶಪಾಂಡೆ ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಡೆಸಲಾಗುವುದು ಅಂತಾ ತಿಳಿಸಿದರು. ಇದೇವೇಳೆ, ಮೈತ್ರಿ ಸರ್ಕಾರದ ಕಾರ್ಯವೈಖರಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿರುವ ಮೈತ್ರಿ ಸರ್ಕಾರಕ್ಕೆ ರಾಜ್ಯದ ರೈತರ ಬಗ್ಗೆ ಕಾಳಜಿ ಇಲ್ಲ. ಸಾಲಮನ್ನಾ ವಿಚಾರದಲ್ಲಿ ಸರ್ಕಾರವು ರೈತರಿಗೆ ಮತ್ತು ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ರು. ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ ಮಾಡುತ್ತೇನೆ ಎಂದು ಹೇಳಿದವರು, ಈಗ ಸಾಲಮನ್ನಾ ಕುರಿತು ದಿನ ಕೊಂದು ಹೇಳಿಕೆ ನೀಡುತ್ತಿದ್ದಾರೆ ಅಂತಾ ಹೇಳಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv