ಕಿಮ್ಸ್​​ ಹೊರ ಗುತ್ತಿಗೆ ನೌಕರರಿಗೆ ಇಲ್ಲ ಸಂಬಳ: ಬೀದಿಗಿಳಿದ ನೌಕರರು

ಹುಬ್ಬಳ್ಳಿ: ಕಿಮ್ಸ್​​ ಆಸ್ಪತ್ರೆಯಲ್ಲಿ ಕೆಲಸ ಮಾಡುವ 6 ನೂರು ಹೊರ ಗುತ್ತಿಗೆ ನೌಕರರಿಗೆ ಕಳೆದ ನಾಲ್ಕು ತಿಂಗಳಿನಿಂದ ಗುತ್ತಿಗೆದಾರರು ವೇತನ ನೀಡಿಲ್ಲ ಎಂದು ಆಸ್ಪತ್ರೆಯ ಆವರಣದಲ್ಲಿ ವೇತನಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಪ್ರತಿಭಟನೆಯಲ್ಲಿ ಕುಳಿತಿದ್ದು, ಇತ್ತ ರೋಗಿಗಳ ಪಾಡು ಕೇಳುವವರು ಇಲ್ಲದಂತಾಗಿದೆ. ಆಸ್ಪತ್ರೆಯ ಸಿಬ್ಬಂದಿ ಗುತ್ತಿಗೆದಾರರ ನಡುವೆ ಉಂಟಾದ ಸಮಸ್ಯೆಯಿಂದ ಆಸ್ಪತ್ರೆಯ ರೋಗಿಗಳ ಮೇಲೆ ಪರಿಣಾಮ ಬಿದ್ದಿದೆ. ಆಸ್ಪತ್ರೆಗೆ ಬಂದ ರೋಗಿಗಳನ್ನು ಕರೆದುಕೊಂಡು ಹೋಗಲು ಯಾವ ಒಬ್ಬ ಸಿಬ್ಬಂದಿಯೂ ಕಾರ್ಯ ನಿರ್ವಹಿಸುತ್ತಿಲ್ಲ. ರೋಗಿಯ ಸಂಬಂಧಿಗಳೇ ಸ್ಟ್ರೆಚರ್​​ನಲ್ಲಿ ಆಸ್ಪತ್ರೆಯೊಳಗೆ ಸಾಗಿಸಿಕೊಂಡು ಹೋಗುವ ಪರಿಸ್ಥಿತಿ ಉಂಟಾಗಿದೆ. ಕಿಮ್ಸ್​​ ಆಸ್ಪತ್ರೆಯ ಎಲ್ಲಾ ವಿಭಾಗದ ಸಿಬ್ಬಂದಿ ಕೊರತೆಯಿಂದಾಗಿ ಆಸ್ಪತ್ರೆ ಎಂಬುದು ಕಸದ ಗುಂಡಿಯಂತಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.com