ಕೌಟುಂಬಿಕ ಕಲಹಕ್ಕೆ ಹೆಂಡ್ತಿಯನ್ನೇ ಕೊಂದ ಪಾಪಿ ಪತಿ.!

ಚಿತ್ರದುರ್ಗ: ಪತಿಯಿಂದಲೇ ಪತ್ನಿಯ ಹತ್ಯೆಯಾದ ಘಟನೆ ಚಳ್ಳಕೆರೆ ತಾಲೂಕಿನ ವಲಸೆ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಪತಿ ಪರಮೇಶ್ವರಪ್ಪ ಎಂಬಾತನೇ ತನ್ನ ಪತ್ನಿಯನ್ನು ಹತ್ಯೆಗೈದ ವ್ಯಕ್ತಿ. ತನ್ನ ಪತ್ನಿ ಪುಟ್ಟಮ್ಮ (56)ರ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿದ್ದಾನೆ. ಕೌಟುಂಬಿಕ ಕಲಹದಿಂದ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ಘಟನಾ ಸ್ಥಳಕ್ಕೆ ಸಿಪಿಐ ತಿಮ್ಮಣ್ಣ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ತಳಕು ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.