‘ನಾನು ಶಾಮನೂರು ಕುಟುಂಬದ ಹರಕೆಯ ಕುರಿಯಲ್ಲ, ಕಾಂಗ್ರೆಸ್ ಅಭ್ಯರ್ಥಿ’

ದಾವಣಗೆರೆ: ನಾನು ಶಾಮನೂರು ಕುಟಂಬದ ಹರಕೆಯ ಕುರಿಯಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಬಿ.ಮಂಜಪ್ಪ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಂಜಪ್ಪ, ನನಗೆ ಶಾಮನೂರು ಕುಟುಂಬದ ಆರ್ಶೀವಾದ ಇದೆ. ‌ಅವರು ನನ್ನ ಬೆಂಬಲಕ್ಕೆ ನಿಂತಿದ್ದಾರೆ. 25 ವರ್ಷಗಳ ನಂತರ ಹಿಂದುಳಿದ ಸಮುದಾಯಕ್ಕೆ ಟಿಕೆಟ್​ ಸಿಕ್ಕಿದೆ‌. ಶಾಮನೂರು ಕುಟುಂಬ ಚುನಾವಣೆ ಕಣದಿಂದ ಹಿಂದೆ ಸರಿದಿರುವುದಕ್ಕೆ ಕಾರಣ ಗೊತ್ತಿಲ್ಲ. ಅವರು ನನ್ನನ್ನು ಬೆಂಬಲಿಸಿದ್ದಾರೆ. ನಾಳೆ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ಜೆಡಿಎಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣಾ ಪ್ರಚಾರ ಮಾಡುತ್ತೇನೆ‌.  ಜಿ.ಎಂ ಸಿದ್ದೇಶ್ವರ್ ಮೂರು ಬಾರಿ ಜಯಗಳಿಸಿರುವುದರಿಂದ ಆಡಳಿತ ವಿರೋಧಿ ಅಲೆ ಇದೆ‌.  ನನ್ನ ಪ್ರಚಾರಕ್ಕೆ ಸಿದ್ದರಾಮಯ್ಯ ದಿನೇಶ್ ಗುಂಡೂರಾವ್ ಸೇರಿದಂತೆ ಎಲ್ಲಾ ಮುಖಂಡರು ಬರುತ್ತಾರೆ ಅಂತಾ ಹೇಳಿದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv