ಸರ್ಕಾರ ಇಷ್ಟೇ ದಿನ ಇರುತ್ತೆ ಅಂತಾ ಹೇಳೊಲ್ಲ, ರೇವಣ್ಣ ಹೀಗೇಕೆ ಹೇಳಿಬಿಟ್ರಿ?!

ಹಾಸನ: ಸರ್ಕಾರ ಇಷ್ಟೇ ದಿನ ಇರುತ್ತೆ ಅಂತಾ ನಾನು ಹೇಳುವುದಿಲ್ಲ. ಇದ್ದಷ್ಟು ದಿನ ಅಭಿವೃದ್ಧಿ ಕೆಲಸ ಮಾಡ್ತೀನಿ ಅಂತಾ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ. ಮೈತ್ರಿ ಸರ್ಕಾರದಲ್ಲಿ ನೂತನ ಲೋಕೋಪಯೋಗಿ ಸಚಿವರಾಗಿ ಆಯ್ಕೆಯಾದ ನಂತರ, ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಹೆಚ್.ಡಿ.ರೇವಣ್ಣ, ಬೇಲೂರಿನ ಚನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿ‌ ವಿಶೇಷ ಪೂಜೆ ಸಲ್ಲಿಸಿದ್ರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಕೇಶವ ದೇವರು ಅಧಿಕಾರ ನೀಡಿದ್ದಾರೆ. ಸರ್ಕಾರ ಇಷ್ಟೇ ದಿನ ಇರುತ್ತೆ ಅಂಥಾ ನಾನು ಹೇಳುವುದಿಲ್ಲ. ಇದ್ದಷ್ಟು ದಿನ ಅಭಿವೃದ್ಧಿ ಕೆಲಸ ಮಾಡುವೆ. ರೈತರ ಹಿತ ಕಾಯಲು ನಮ್ಮ ಸರ್ಕಾರ ಬದ್ಧ ಅಂತಾ ಹೇಳಿದ್ರು. ನಂತರ ಸಾಲ ಮನ್ನಾ ವಿಚಾರವಾಗಿ ಮಾತನಾಡಿದ ಅವರು, ನಾಲ್ಕು ವರ್ಷದ ಅವಧಿಯಲ್ಲಿ ಕೇಂದ್ರ ಸರ್ಕಾರ ರೈತರಿಗೆ ಯಾವ ಸವಲತ್ತು ನೀಡಿದೆ ಎಂಬುದನ್ನು ರಾಜ್ಯ ಬಿಜೆಪಿ ನಾಯಕರು ತಿಳಿಸಲಿ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಾಕತ್ತಿದ್ದರೆ, ರೈತರ ಸಾಲ ಮನ್ನಾ ಮಾಡಲಿ ಅಂತಾ ಸವಾಲು ಹಾಕಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv