ಚುನಾವಣೆಗೆ ಸ್ಪರ್ಧಿಸಿ ಖರ್ಚು ಮಾಡಲು ನನ್ನ ಬಳಿ ಹಣ ಇಲ್ಲ- ಕಿಮ್ಮನೆ ರತ್ನಾಕರ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಉಪ ಚುನಾವಣೆ ಕಾಂಗ್ರೆಸ್​-ಜೆಡಿಎಸ್​ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ ಮುಂದುವರೆದಿದೆ. ಈಗಾಗಲೇ ವಯಸ್ಸಿನ ಕಾರಣ ನೀಡಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹಿಂದೇಟು ಹಾಕಿದ್ದಾರೆ. ಹೆಚ್.ಎಸ್.ಸುಂದರೇಶ್ 2019ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್​ ನೀಡುವ ಭರವಸೆ ನೀಡಿದರೆ ಮಾತ್ರ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಇನ್ನು ಜೆಡಿಎಸ್​ನಿಂದ ಮಧು ಬಂಗಾರಪ್ಪ ಸಹ ಆಸಕ್ತಿ ತೋರಿಲ್ಲ. ಆದ್ದರಿಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ ಸ್ಪರ್ಧಿಸಲಿದ್ದಾರೆ ಎನ್ನುವ ಮಾತು ಕೇಳಿಬಂದಿತ್ತು.

ಈ ಕುರಿತು ಮಾಜಿ ಸಚಿವ ಕಿಮ್ಮನೆ ರತ್ನಾಕರ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗ ಲೋಕಸಭೆ ಉಪ ಚುನಾವಣೆಗೆ ನಾನು ಆಕಾಂಕ್ಷಿ ಅಲ್ಲ ಎಂದು ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ. ಚುನಾವಣೆಗೆ ಸ್ಪರ್ಧಿಸಿ ಖರ್ಚು ಮಾಡಲು ನನ್ನ ಬಳಿ ಹಣ ಇಲ್ಲ. ಕೆಲವೇ ತಿಂಗಳಿಗಾಗಿ ಅಗತ್ಯವೇ ಇಲ್ಲದ ಈ ಚುನಾವಣೆಯನ್ನು ಸರ್ಕಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ತಡೆಯಬಹುದು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಪಕ್ಷದ ಹೈಕಮಾಂಡ್​​​ಗೆ ತಿಳಿಸಿದ್ದೇನೆ. ಸಮ್ಮಿಶ್ರ ಸರ್ಕಾರದಲ್ಲಿ ಮೈತ್ರಿ ಧರ್ಮ ಪಾಲಿಸಬೇಕಿರುವುದರಿಂದ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸ ಲಾಗುವುದು ಎಂದರು.
ಕೇಂದ್ರ ಸರ್ಕಾರ ಎಲ್ಲಾ ಕ್ಷೇತ್ರದಲ್ಲಿ ವಿಫಲವಾಗಿದೆ. ಪ್ರಧಾನಿ ನರೇಂದ್ರ ಮೋದಿ ಬರಿ ಭಾಣಷದಿಂದ ಮಾಡುವುದರಿಂದ ದೇಶ ಅಭಿವೃದ್ಧಿ ಆಗುವುದಿಲ್ಲ. ಹಾಗಾಗಿ ಈ ಬಾರಿಯ ಉಪ ಉಪ ಚುನಾವಣೆಯಲ್ಲಿ ಮೈತ್ರಿ ಕೂಟದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv