ಫೆ.3ರಂದು ಐ ಲವ್‌ ಯೂ ಸಿನಿ ಧ್ವನಿಸುರುಳಿ ದಾವಣಗೆರೆಯಲ್ಲಿ ಬಿಡುಗಡೆ

ದಾವಣಗೆರೆ: ಫೆ. 3ರಂದು ಐ ಲವ್‌ ಯೂ ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ದಾವಣಗೆರೆಯಲ್ಲಿ ನಡೆಯಲಿದೆ ಎಂದು ನಿರ್ದೇಶಕ ಆರ್. ಚಂದ್ರು ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ.3ರಂದು ಸಂಜೆ 6.30ಕ್ಕೆ  ಹೈಸ್ಕೂಲ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ನಟ ಉಪೇಂದ್ರ, ನಟಿ ರಚಿತಾ ರಾಮ್ ಸೇರಿದಂತೆ ಅನೇಕ ಕಲಾವಿದರು ಭಾಗಿಯಾಗಲಿದ್ದಾರೆ. ಐ ಲವ್‌ ಯೂ ಸಿನಿಮಾವನ್ನು ಆರ್.ಚಂದ್ರು ನಿರ್ದೇಶನ ಮಾಡಿದ್ದು. ಇದು ಅವರ 11ನೇ ಚಿತ್ರ, ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ನಟಿ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv