ಕೆಪಿಸಿಸಿ ಅಧ್ಯಕ್ಷ ಸ್ಥಾನ, ನಾನೇನೂ ಹೇಳಲ್ಲ: ಸಚಿವ ದೇಶಪಾಂಡೆ

ಧಾರವಾಡ: ಕಂದಾಯ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಾದ ಬಳಿಕ ಮೊದಲ ಬಾರಿಗೆ ಆರ್​ವಿ ದೇಶಪಾಂಡೆ ಧಾರವಾಡಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನ ನೇಮಿಸಬೇಕೆಂದು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ಇನ್ನು ನೀರಾವರಿ ಇಲಾಖೆಯಲ್ಲಿ ಪಿಡಬ್ಲ್ಯೂಡಿ ಸಚಿವ ಹೆಚ್. ಡಿ. ರೇವಣ್ಣ ಹಸ್ತಕ್ಷೇಪ ವಿಚಾರದ ಬಗ್ಗೆ ತನಗೇನೂ ಗೊತ್ತಿಲ್ಲ ಅಂತ ಹೇಳಿದ್ರು.

ಇನ್ನು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಪ್ರತಿಕ್ರಿಯಿಸಿದ ಅವರು, ನಿರಂತರ ಮಳೆಯಿಂದಾಗಿ ಜಾನುವಾರು, ಆಸ್ತಿಪಾಸ್ತಿ ಹಾನಿಯಾಗಿದೆ. ಸರ್ಕಾರಿ ಆಸ್ತಿಪಾಸ್ತಿಯೂ ಹಾನಿಯಾಗಿದೆ. ರಾಜ್ಯದಲ್ಲಿ ಮಳೆ ಅವಾಂತರದಿಂದ ಮೃತಪಟ್ಟಿರುವವರ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ. ಧಾರವಾಡ ಜಿಲ್ಲೆಯಲ್ಲೂ ಮೃತರ ಕುಟುಂಬಕ್ಕೆ ಜಿಲ್ಲಾಧಿಕಾರಿ ಎಸ್​​.ಬಿ. ಬೊಮ್ಮನಹಳ್ಳಿ ಪರಿಹಾರ ನೀಡಿದ್ದಾರೆ. ಇನ್ನೊಬ್ಬ ಮೃತನ ಸಂಬಂಧಿಕರಿಗೆ ಪರಿಹಾರ ನೀಡಬೇಕಾಗಿದೆ. ಬೆಂಗಳೂರಿನ ಅಧಿಕಾರಿಗಳ ಜತೆ ಸಭೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳಲು ಸೂಚಿಸಿರುವೆ ಎಂದು ಸಚಿವ ಆರ್​.ವಿ. ದೇಶಪಾಂಡೆ ತಿಳಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv