ಈ ಬಾರಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ತೇನೆ: ಸಂಸದ ಜಿ.ಎಂ ಸಿದ್ದೇಶ್ವರ್

ದಾವಣಗೆರೆ: ನನಗೆ ಕಾಂಗ್ರೆಸ್ ನೇರ ಎದುರಾಳಿ. ಈ ಬಾರಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಟಿಕೆಟ್ ನೀಡಿದ್ದಕ್ಕೆ ಅಮಿತ್ ಶಾ ಮತ್ತು ಬಿಎಸ್​ವೈಗೆ ಕೃತಜ್ಞತೆ ಹೇಳುತ್ತೇನೆ. ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕೆ ರಾಷ್ಟ್ರ ಮತ್ತು ರಾಜ್ಯಾಧ್ಯಕ್ಷರಿಗೆ ಧನ್ಯವಾದ ಎಂದರು. ಈ ಬಾರಿಯೂ ನಾನೇ ಗೆಲ್ಲುತ್ತೇನೆ. ಮತದಾರರ ಆಶೀರ್ವಾದ ನನ್ನ ಮೇಲಿದೆ. ನನ್ನ ಅಭಿವೃದ್ಧಿ ಕೆಲಸಗಳು ಹಾಗೂ ಮೋದಿಯವರ ಅಭಿವೃದ್ಧಿ ಕೆಲಸ ಕೈ ಹಿಡಿಯಲಿವೆ ಎಂದು ಸಿದ್ದೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ಸಿದ್ದೇಶ್ವರ್ ಮೂರು ಬಾರಿ ಗೆದ್ದು ಹ್ಯಾಟ್ರಿಕ್ ಸಾಧಿಸಿದ್ದಾರೆ. ಈ ಬಾರಿಯೂ ಅವರಿಗೆ ಅದೃಷ್ಟ ಪರೀಕ್ಷೆ ಎದುರಾಗಿದೆ. ಕಾಂಗ್ರೆಸ್‌ನಿಂದ ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್​ಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಆದ್ರೆ ಸ್ಪರ್ಧೆ ಬಗ್ಗೆ ಇನ್ನು ಮಲ್ಲಿಕಾರ್ಜುನ್ ಖಚಿತಪಡಿಸಿಲ್ಲ.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv