ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕ ಬಂದ್‌ಗೆ ಕರೆ ಕೊಡ್ತೀವಿ: ವಾಟಾಳ್ ನಾಗರಾಜ್

ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಪು ವಿರೋಧಿಸಿ ಸೋಮವಾರ ಕೆ.ಆರ್.ಎಸ್ ಅಣೆಕಟ್ಟೆಗೆ ಮುತ್ತಿಗೆ ಹಾಕಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಒಳಹರಿವು ಹೆಚ್ಚಿದರೆ ತಮಿಳುನಾಡಿಗೆ 9.19 ಟಿಎಂಸಿ ಕಾವೇರಿ ‌ನೀರು ಬಿಡುಗಡೆ ಮಾಡುವಂತೆ ಕಾವೇರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಒಳಹರಿವು ಹೆಚ್ಚಾದರೂ ತಮಿಳುನಾಡಿಗೆ ನೀರು ಬಿಡಬಾರದು. ನಮ್ಮ ಜನ ನೀರಿಲ್ಲದೇ ಸಂಕಷ್ಟದಲ್ಲಿ ಇದ್ದಾರೆ. ಹೀಗಿರುವಾಗ ಪ್ರಾಧಿಕಾರದ ತೀರ್ಪು ವೈಜ್ಞಾನಿಕ ಅಲ್ಲ. ತೀರ್ಪಿನ ಬಗ್ಗೆ ಪ್ರಾಧಿಕಾರ ಪುನರ್ ಪರಿಶೀಲಿಸಬೇಕು ಎಂದರು. ಒಂದು ವೇಳೆ ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕ ಬಂದ್ ಗೆ ಕರೆ ಕೊಡ್ತೀವಿ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.

Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv