‘ಮೋದಿ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸಿದರೆ, ಸೋಲಿಸೋದು ಖಚಿತ’

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಪರಮೇಶ್ವರ್​, ಇಲ್ಲಿ ಸ್ಪರ್ಧೆ ಮಾಡಿದರೆ ಅವರನ್ನು ಸೋಲಿಸುತ್ತೇವೆ ಎಂದರು.

ಕೊರಟಗೆರೆ ಮತ ಕ್ಷೇತ್ರ ವ್ಯಾಪ್ತಿಯ ಕೋರಾದಲ್ಲಿ  ಮಾತನಾಡುತ್ತಿದ್ದ ಅವರು, ಪ್ರಧಾನಿ ಮೋದಿ ರಾಜ್ಯದ ಯಾವ ಮೂಲೆಯಿಂದ ಸ್ಪರ್ಧೆ ಮಾಡಿದರೂ, ನಾವು ಅವರನ್ನು ಸೋಲಿಸುತ್ತೇವೆ. ಆ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಪುಟ್ಟರಂಗಶೆಟ್ಟಿ ಅಸಮಾಧಾನ ವಿಚಾರವಾಗಿ ಮಾತನಾಡಿದ ಪರಮೇಶ್ವರ್​, ದೊಡ್ಡ ಹಬ್ಬ ನಡೆಯುವಾಗ ಕೆಲ ಬಿನ್ನಾಭಿಪ್ರಾಯಗಳು ಸ್ವಾಭಾವಿಕ. ನಾನಂತೂ ಅಕ್ಟೋಬರ್​​ 14,16,19ರಂದು ಮೂರು ದಿನ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ. ಇದನ್ನು ಬಿಟ್ಟು ಬೇರೆ ಯಾವುದೇ ಬಿನ್ನಾಭಿಪ್ರಾಯ ಇಲ್ಲ ಡಿಸಿಎಂ ಪರಮೇಶ್ವರ್​ ಸ್ಪಷ್ಟಪಡಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: conatct@firstnews.tv