ಬಿರಿಯಾನಿ ಬಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಮೈಸೂರಿನಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದರು.

ಮಾಜಿ ಸಚಿವ ತನ್ವೀರ್ ಸೇಠ್ ನೇತೃತ್ವದಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಸ್ವತ: ಸಿದ್ಧರಾಮಯ್ಯನವರೇ ಔತಣದಲ್ಲಿ ಭಾಗಿಯಾಗಿದ್ದವರಿಗೆ ಬಿರಿಯಾನಿ ಬಡಿಸಿದ್ದು ವಿಶೇಷವಾಗಿತ್ತು. ಇದೇ ವೇಳೆ ತನ್ವೀರ್ ಸೇಠ್ ಬೆಂಬಲಿಗರು ಸಚಿವ ಸ್ಥಾನ ನೀಡುವಂತೆ ಮಾಜಿ ಸಿಎಂಗೆ ಒತ್ತಾಯಿಸಿದ್ರು.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv