ಕೋರ್ಟ್‌ ಸೂಚನೆಯಂತೆ ಗಣಿ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಿ: ಎಸ್‌.ಆರ್.ಹಿರೇಮಠ್‌

ಧಾರವಾಡ: ಬಳ್ಳಾರಿ ಅಕ್ರಮ ಗಣಿಗಾರಿಕೆಯಿಂದ ಕೃಷಿ, ಆರೋಗ್ಯ, ಪರಿಸರದ ಮೇಲೆ ಹಾನಿಯಾದ ಹಿನ್ನೆಲೆಯಲ್ಲಿ ಸಾವಿರಾರು ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಆ ಎಲ್ಲಾ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವಂತೆ ಸುಪ್ರೀಂ ಕೋರ್ಟ್​ ಸೂಚಿಸಿದ್ದು, ಇದು  ಸ್ವಾಗತಾರ್ಹ ಕ್ರಮ ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಗಣಿ ಕಂಪನಿಗಳಿಂದ ಒಂದು ಲಕ್ಷ ಕೋಟಿ ರೂಪಾಯಿ ವಸೂಲಿ ಮಾಡಬೇಕು. ಗಣಿಬಾಧಿತ ಪ್ರದೇಶದಲ್ಲಿ ಪುನರ್ವಸತಿ ಮತ್ತು ಮರು ನಿರ್ಮಾಣ ಕಾರ್ಯಕ್ಕೆ ಮುಂದಾಗಬೇಕು ಅಂತಾ ಹಿರೇಮಠ್ ಆಗ್ರಹಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv