ಅಕ್ರಮ ಮರಳು ಅಡ್ಡೆ ಮೇಲೆ ದಾಳಿ 6 ಟಿಪ್ಪರ್ ವಶ

ಬಳ್ಳಾರಿ: ಕಂಪ್ಲಿ ಸಮೀಪದ ಉಪ್ಪಾರಹಳ್ಳಿ ಗ್ರಾಮದ ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಮರಳು ದಂಧೆಯ ಖಚಿತ ಮಾಹಿತಿ ಅರಿತು ಪಿಎಸ್ ಐ ನಿರಂಜನ್ ನೇತೃತ್ವದಲ್ಲಿ ದಾಳಿ ಮಾಡಿ 6 ಟಿಪ್ಪರ್ ಲಾರಿ, ಒಂದು ಜೆಸಿಬಿ ಹಾಗೂ 44 ಸಾವಿರ ರೂಪಾಯಿ ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಟಿಪ್ಪರ್​​​​​​​​ಗಳ ಚಾಲಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಟಿಪ್ಪರ್​​​​​ಗಳ ಮಾಲೀಕರು ಹಾಗೂ ಚಾಲಕರ ವಿರುದ್ಧ ಕಂಪ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv