ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ: ಕೋಟ್ಯಾಂತರ ರೂಪಾಯಿ ಮೌಲ್ಯದ ಮರಳು ಜಪ್ತಿ

ಕಲಬುರ್ಗಿ: ಕಲಬುರ್ಗಿ ಜಿಲ್ಲಾ ಪೊಲೀಸ್ ಹಾಗೂ ಎ.ಸಿ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಅಕ್ರಮ ಮರಳು ಅಡ್ಡೆಗಳ ಮೇಲೆ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಫಜಲಪುರ ಹಾಗೂ ಜೇವರ್ಗಿ ತಾಲೂಕಿನ‌ ವಿವಿಧೆಡೆ ಸಂಗ್ರಹಿಸಿಟ್ಟಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಮರಳು ಜಪ್ತಿ ಮಾಡಲಾಗಿದೆ. ಅಲ್ಲದೇ ನೂರಕ್ಕೂ ಅಧಿಕ ಟಿಪ್ಪರ್ ಮರಳು ವಶಕ್ಕೆ ಪಡೆದಿದ್ದು, 300ಕ್ಕೂ ಅಧಿಕ ಟಿಪ್ಪರ್​​ಗಳಲ್ಲಿ ಸಂಗ್ರಹಿಸಿಟ್ಟಿದ್ದ ಮರಳನ್ನು ಕೂಡ ಜಪ್ತಿ ಮಾಡಲಾಗಿದೆ. ಜಮೀನುಗಳಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟಿದ್ದ ಹಲವರ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಪೊಲೀಸರು ಪ್ರಮುಖ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv