ಅಕ್ರಮ ಮರಳು ಸಾಗಣೆ: ಪೊಲೀಸರಿಂದ ಟಿಪ್ಪರ್​ ಜಪ್ತಿ

ಕೊಪ್ಪಳ: ಕೊಪ್ಪಳದಲ್ಲಿ ನಿನ್ನೆ ತಡರಾತ್ರಿ ಪೊಲೀಸರು ಅಕ್ರಮ ಮರಳು ಸಾಗಣೆಯ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದರು. ಹಿರೇಹಳ್ಳದಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್​ಐ ಗುರುರಾಜ್ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು. ಈ ವೇಳೆ ಕೋಳೂರ್ ಕ್ರಾಸ್ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್​​ ಹಾಗೂ ₹6000 ಬೆಲೆ ಬಾಳುವ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮರಳು ಸಾಗಾಟ ಮಾಡುತ್ತಿದ್ದ ಬಸವರಾಜ ಕರೂರ, ಮಾಲೀಕ ಪ್ರಕಾಶ ಕವಲೂರು ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv