ಅಕ್ರಮ ಗೂಬೆ ಸಾಗಾಟ ಇಬ್ಬರ ಬಂಧನ..!

ಬೆಳಗಾವಿ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಅಕ್ರಮವಾಗಿ ಗೂಬೆ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯ ಬಲೆಗೆ ಬಿದ್ದಿದ್ದಾರೆ. ಆರೋಪಿಗಳನ್ನು ಮಹಾರಾಷ್ಟ್ರ ಮೂಲದ ಪ್ರಮೋದ್ ಅಪ್ಪಾಸಾಬ್ ಮೋಕಾಶಿ (40), ಬಾಬುಸಾಬ್ ಅಪ್ಪಾಸಾಬ್ ಕಾಂಬಳೆ (65), ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಒಂದು ಕಾರ್ ಮತ್ತು 2 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಸಂಕೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಿಳಿದು ಬಂದಿದೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv