ಪರಿಸರ ಜಾಗೃತಿ ಮೂಡಿಸಿದ ಇಸ್ಲಾಮಿಕ್ ಶಾಲೆಯ ವಿದ್ಯಾರ್ಥಿಗಳು

ಹುಬ್ಬಳ್ಳಿ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳು ಇಂದು ಪರಿಸರ ಹಾಗೂ ಪ್ಲಾಸ್ಟಿಕ್‌ನಿಂದಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ತೋಯಿದ್ ಇಸ್ಲಾಮಿಕ್ ಶಾಲೆಯ ನೂರಾರು ವಿದ್ಯಾರ್ಥಿಗಳು ಒಂದು ಗಂಟೆಗೂ ಹೆಚ್ಚು ಕಾಲ ತಾವು ಬರೆದ ಚಿತ್ರಗಳ ಜೊತೆ ಬಿತ್ತಿ ಪತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ಜಾಗೃತಿ ಮೂಡಿಸಿದ್ರು. ನಗರದ ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಹಲವೆಡೆ ಅರಿವು ಮೂಡಿಸಿದ್ದು ವಿಶೇಷವಾಗಿತ್ತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv