ಸ್ಕೂಟಿ ಡಿಕ್ಕಿಯಲ್ಲಿದ್ದ ₹6 ಲಕ್ಷ ಜಪ್ತಿ

ಧಾರವಾಡ: ದಾಖಲೆ ಇಲ್ಲದೇ ಸ್ಕೂಟಿಯಲ್ಲಿ‌ ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ರೂಪಾಯಿಯನ್ನು ಚುನಾವಣಾ ಅಧಿಕಾರಿಗಳು ಧಾರವಾಡ ಜಿಲ್ಲೆಯ ಕೊಂಡಿಕೊಪ್ಪ ಚೆಕ್‌ಪೋಸ್ಟ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಎಫ್‌ಎಸ್‌ಟಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ, ಸ್ಕೂಟಿಯ ಡಿಕ್ಕಿಯಲ್ಲಿ ಹಣ ಪತ್ತೆಯಾಗಿದೆ. ಕೊಂಡಿಕೊಪ್ಪ ಪ್ರದೇಶ ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ. ಇನ್ನು ನಾಳೆ ಮತದಾನ ಇರುವುದರಿಂದ ಎಲ್ಲೆಡೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಗುತ್ತಿಗೆದಾರರು, ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರಮುಖ ಕಾರ್ಯಕರ್ತರ ಮೇಲೆ ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ.

Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv