ಮೃತರ ಕುಟುಂಬದವರಿಗೆ ₹10 ಲಕ್ಷ ಪರಿಹಾರ ಕೊಡಬೇಕು: ಜಗದೀಶ್ ಶೆಟ್ಟರ್.

ಧಾರವಾಡ: ಕಟ್ಟಡ ದುರಂತದಲ್ಲಿ ಸದ್ಯ ಕ್ಕೆ 9 ಜನ ಮೃತಪಟ್ಟಿದ್ದಾರೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಕಟ್ಟಡದ ಮಾಲೀಕರು ಹಾಗೂ ಎಂಜಿನೀಯರ್​ ವಿರುದ್ದ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಗರದಲ್ಲಿ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಮೃತರ ಕುಟುಂಬದವರಿಗೆ 10 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಹಾಗೂ ಗಾಯಾಳುಗಳಿಗೆ 2 ರಿಂದ 5 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದರು. ಅಲ್ಲದೇ, ಪರವಾನಗಿ ಇಲ್ಲದೇ ಹೆಚ್ಚುವರಿ ಅಂತಸ್ತು ಕಟ್ಟಡ ಕಟ್ಟಿ ಕಳಪೆ ಕಾಮಗಾರಿ ಮಾಡಲು ಸಹಕಾರ ಮಾಡಿದ ಪಾಲಿಕೆ ಸಿಬ್ಬಂದಿಗೆ ಕಾನುನು ಪ್ರಕಾರ ಕ್ರಮ ಕೈಗೊಳ್ಳಬೇಕು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಥಳಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಒತ್ತಾಯಿಸಿದ್ದಾರೆ.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv