ಜಗದ್ಗುರು ವಚನಾನಂದ ಶ್ರೀಗಳಿಂದ ನೂತನ ಸಿಎಂ ಭೇಟಿ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀಜಗದ್ಗುರು ವಚನಾನಂದ ಮಹಸ್ವಾಮಿಗಳು ಭೇಟಿಯಾಗಿ ಶುಭಾಶಯ ಕೋರಿದರು. ಇದೇ ವೇಳೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕುರಿತು ಸಮಾಲೋಚನೆ ನಡೆಸಿದ ಸ್ವಾಮೀಜಿಗಳು, ಯೋಗರತ್ನ ಸಮಾರಂಭಕ್ಕೆ ಮುಖ್ಯಮಂತ್ರಿಗಳನ್ನ ಆಹ್ವಾನಿಸಿದರು.