ಜೆಡಿಎಸ್ ಕುಟುಂಬ ರಾಜಕಾರಣದ ಸಿಂಬಲ್ ಕಣ್ಣೀರು : ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಜೆಡಿಎಸ್ ಕುಟುಂಬ ರಾಜಕಾರಣದ ಸಿಂಬಲ್ ಕಣ್ಣೀರು. ಕುಮಾರಸ್ವಾಮಿ ಅಳುಮುಂಜಿ ಅನ್ನೋದು ಮತ್ತೆ ಸಾಬೀತಾಗಿದೆ. ಕಣ್ಣಿರು ಸುರಿಸಿ ಅಧಿಕಾರ ಹಿಡಿಬೇಕು ಅಂತ ಜೆಡಿಎಸ್ ಹೊರಟಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಬಿಜೆಪಿ ಅಲೆಯಿದೆ. ಬಿಜೆಪಿ ಶಿಸ್ತು ಬದ್ಧವಾಗಿ ಪ್ರಚಾರ ಮಾಡುತ್ತಿದೆ. ನರೇಂದ್ರ ಮೋದಿ, ಅಮಿತ್ ಷಾ ಅವರು ದೊಡ್ಡ ಮಟ್ಟದಲ್ಲಿ ರ‌್ಯಾಲಿಗಳಿಂದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸದ ನಾಯಕರ ಮಧ್ಯೆ ಮುಸುಕಿನ ಗುದ್ದಾಟ ಮುಂದುವರೆದಿದೆ. ಹಾಸನ, ಮಂಡ್ಯ ,ತುಮಕೂರರಲ್ಲಿ ಕಾಂಗ್ರೆಸ್-ಜೆಡಿಎಸ್ ಮುಸುಕಿನ ಗುದ್ದಾಟ ನಡೆದಿದೆ. ಮೈತ್ರಿ ಸರ್ಕಾರದಲ್ಲಿ ಅಸಮಾಧಾನ ಕಾಂಗ್ರೆಸ್ ಜೆಡಿಎಸ್ ಮುಳುವಾಗಲಿದೆ. ಸುಮಲತಾ ಬಗ್ಗೆ ಕುಮಾರಸ್ವಾಮಿ ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದು ಶೆಟ್ಟರ್ ಹೇಳಿದರು.

ಎಂ.ಬಿ ಪಾಟೀಲ್ ಸೋನಿಯಾ ಗಾಂಧಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಲಿಂಗಾಯತ ವೀರಶೈವ ಮತಗಳನ್ನು ವಿಭಜಿಸಿದರೆ ರಾಜಕೀಯ ಲಾಭವಾಗುತ್ತೆ ಎಂದು ಪತ್ರ ಬರೆದಿದ್ದಾರೆ. ಕಳೆದ ವಿಧಾನ ಸಭಾ ಚುನಾವಣಾ ಸಮಯದಲ್ಲಿ ಜಾತಿಗಳ, ಧರ್ಮಗಳ ಹೊಡೆಯುವ ಕೆಲಸಕ್ಕೆ ಕೈ ಹಾಕಿದ್ದರು ಅನ್ನೋದು ಸ್ಪಷ್ಟವಾಗಿದೆ. ಈಗಲೂ ರಾಜಕೀಯ ಉದ್ದೇಶಕ್ಕಾಗಿ ಎಂ. ಬಿ ಪಾಟೀಲರು ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ‌ ಎಂದು ಜಗದೀಶ್ ಶೆಟ್ಟರ್ ಆರೋಪಿಸಿದರು.

Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv