ಕೈ ಮುಖಂಡನ ಮೇಲೆ ಜೆಡಿಎಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ

ಬೆಂಗಳೂರು: ಕಾಂಗ್ರೆಸ್ ಮುಖಂಡನ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಬಾಗಲಗುಂಟೆಯ14ನೇ ವಾರ್ಡ್​ನ ಕಾಂಗ್ರೆಸ್​ ಅಧ್ಯಕ್ಷ ಜಗದೀಶ್​ ಮೇಲೆ ದಾಸರಹಳ್ಳಿ ಜೆಡಿಎಸ್ ಶಾಸಕ ಆರ್. ಮಂಜುನಾಥ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಅಂತಾ ಆರೋಪಿಸಲಾಗಿದೆೆ.

ರಾಜಕೀಯ ವೈಷಮ್ಯದಿಂದ ನಡೀಯಿತಾ ಹಲ್ಲೆ?
ರಾಜಕೀಯ ವೈಷಮ್ಯದಿಂದ ದಾಸರಹಳ್ಳಿ ಜೆಡಿಎಸ್ ಶಾಸಕ ಆರ್. ಮಂಜುನಾಥ್ ಬೆಂಬಲಿಗರು ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗ್ತಿದೆ. ರಮೇಶ್ ಅಲಿಯಾಸ್ ಕಿಚ್ಚ, ನಾಗೇಂದ್ರಸ್ವಾಮಿ ಅಲಿಯಾಸ್ ನಾಗೇಂದ್ರ ಸೇರಿ ಜಗದೀಶ್ ಮೇಲೆ ಒಟ್ಟು 7ಜನ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಬಾಗಲಗುಂಟೆಯಲ್ಲಿ ಈ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆ ಹಲ್ಲೆ ಮಾಡಿದ್ದಾರೆ ಅಂತಾ ಗಂಭೀರ ಆರೋಪ ಕೇಳಿ ಬಂದಿದ್ದು, ಸದ್ಯ ಹಲ್ಲೆಗೊಳಗಾದ ಜಗದೀಶ್​ನನ್ನ ಖಾಸಗಿ ಆಸ್ಪತ್ರೆಯ ದಾಖಲಿಸಲಾಗಿದೆ. ಈ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: conatct@firstnews.tv