‘ಜೆಡಿಎಸ್ ಪ್ರಾಬಲ್ಯ ಇಲ್ಲವೆಂದು ದಕ್ಷಿಣ ಕನ್ನಡ, ಉಡುಪಿಗೆ ಏನೇನೂ ಇಲ್ಲಾ..!’

ಮಂಗಳೂರು: ಮುಖ್ಯಮಂತ್ರಿ, ಹಣಕಾಸು ಸಚಿವ ಹೆಚ್​ಡಿ ಕುಮಾರಸ್ವಾಮಿ ರಾಜ್ಯ ಬಜೆಟ್ ಮಂಡನೆ ಮಾಡಿದ ಬೆನ್ನಲ್ಲೇ ಶಾಸಕರುಗಳ ಅಸಮಾಧಾನ ಭುಗಿಲೆದ್ದಿದೆ. ಬಜೆಟ್ ಮಂಡನೆ ಮುಗಿದ ಬಳಿಕ ಮಾತನಾಡಿದ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಎಂಡೋಸಲ್ಫಾನ್ ಬಗ್ಗೆ ಮಾತೇ ಇಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಏನೇನೂ ಇಲ್ಲಾ.. ಅಂತಾ ಅಸಮಾಧಾನ ಹೊರಹಾಕಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರಿಗೆ ಯಾವುದೇ ಅನುದಾನ ಕೊಟ್ಟಿಲ್ಲ. ಮರುಳುಗಾರಿಕೆಗೆ ಬ್ರೇಕ್ ಹಾಕ್ತಾರೆ ಎಂದುಕೊಂಡಿದ್ವೀ.. ಅದ್ರೆ ಅದ್ಯಾವುದೂ ಇಂದಿನ ಬಜೆಟ್​ನಲ್ಲಿ ಇಲ್ಲಾ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಜೆಡಿಎಸ್ ಪ್ರಾಬಲ್ಯ ಇಲ್ಲ ಎಂದು ನಿರ್ಲಕ್ಷ್ಯಿಸಲಾಗಿದೆ ಎಂದು ಅವರು ಕಿಡಿಕಾರಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv