ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

ರಾಮನಗರ: ನಿನ್ನೆ ರಾತ್ರಿ ಮಾಗಡಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಗಿದೆ. ಇದನ್ನ ಖಂಡಿಸಿ ಇಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸ್ತಿದ್ದಾರೆ.

ಮಾಗಡಿ ಪೊಲೀಸ್ ಠಾಣೆ ಎದುರಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಜಮಾವಣೆಗೊಂಡು, ಆರೋಪಿಗಳನ್ನ ಬಂಧಿಸಬೇಕು ಅಂತ ಆಗ್ರಹಿಸಿದ್ರು. ಅಲ್ಲದೆ, ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ವಿಳಂಬ ಮಾಡ್ತಿದ್ದಾರೆ ಅಂತ ಆರೋಪಿಸಿದ್ರು. ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪ್ರತಿಭಟನಾ ನಿರತರು, ಪೊಲೀಸ್ ಠಾಣೆ ಮೇಲೂ ಕಲ್ಲು ತೂರಾಟ ನಡೆಸಿದ್ರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಘು ಲಾಠಿ ಪ್ರಹಾರ ಮಾಡಿದ್ರು.

ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಎರಡೂ ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದರು. ಈ ವೇಳೆ ನಗರಸಭಾ ಸದಸ್ಯರೊಬ್ಬರ ಮೇಲೆ ಹಲ್ಲೆ ಕೂಡ ನಡೆದಿತ್ತು.

Leave a Reply

Your email address will not be published. Required fields are marked *