ವಿಧಾನಸೌಧದಲ್ಲಿಂದು ಜೆಡಿಎಸ್ ಶಾಸಕಾಂಗ ಸಭೆ

ಬೆಂಗಳೂರು : ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕ ಹಾಗೂ ಸಿಎಂ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಸಭೆ ಆರಂಭವಾಗಲಿದೆ. ಇನ್ನೂ ಕಲಾಪದಲ್ಲಿ ಶಾಸಕರು ಮತ್ತು ಸಚಿವರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ವಿಪ್ ಜಾರಿಮಾಡಲಾಗಿದೆ. ಬಿಜೆಪಿ ಒತ್ತಡಕ್ಕೆ ಮಣಿದು ಬಜೆಟ್​ನ್ನು ಮತಕ್ಕೆ ಹಾಕುವ ಅವಕಾಶ ಇರುವುದರಿಂದ ಸ್ಪೀಕರ್ ಸದನದಲ್ಲಿ ಬಹುಮತ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ. ಹೀಗಾಗಿ ಜೆಡಿಎಸ್ ನಿಂದ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. ಅಲ್ಲದೆ ಬಸವರಾಜ್ ಹೊರಟ್ಟಿ ಅವರನ್ನೇ ಪರಿಷತ್‌ ಸಭಾಪತಿ ಮಾಡಲು ಸಭೆಯಲ್ಲಿ ಚರ್ಚೆ ನಡೆಯಲಿದೆ.