ಬಂದ್​​ ನಡೆಸುವವರ ವಿರುದ್ಧ ಕ್ರಮಕ್ಕೆ ಆಗ್ರಹ

ರಾಯಚೂರು: ರೈತರ ಸಾಲ ಮನ್ನಾಗೆ ಒತ್ತಾಯಿಸಿ ನಾಳೆ ಕರ್ನಾಟಕ ಬಂದ್ ನಡೆಸುವವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ವಿರೂಪಾಕ್ಷಿ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜೊತೆ ಚರ್ಚಿಸಿ ಸಾಲ ಮನ್ನಾ ಬಗ್ಗೆ ನಿರ್ಣಯ ಕೈಗೊಳ್ಳಲು ಕುಮಾರಸ್ವಾಮಿಯವರು ಸಮಯ ಕೇಳಿದ್ದಾರೆ. ಸಹಕಾರಿ ಬ್ಯಾಂಕ್ , ರಾಷ್ಟ್ರೀಕೃತ ಬ್ಯಾಂಕ್​​​​​​​​​ಗಳಲ್ಲಿಯ ಸಾಲ‌ಮನ್ನಾ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ತಮ್ಮ ಸರ್ಕಾರ ಬಿದ್ದೋಗಿದೆ ಎಂಬ ಕಾರಣಕ್ಕೆ ಬಿಜೆಪಿಯವರು ಬಂದ್ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿದ ಅವರು ಬಂದ್​​ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಅದಾಗಿಯೂ ಬಂದ್ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv