ಜೆಡಿಎಸ್ ರಾಜ್ಯಪ್ರಧಾನ ಕಾರ್ಯದರ್ಶಿ ಎಂ.ಸಿ.ಅಶ್ವಥ್

ಬೆಂಗಳೂರು: ಚನ್ನಪಟ್ಟಣದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಸಿ.ಅಶ್ವಥ್​ಗೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಅಥವಾ ಕುಮಾರಸ್ವಾಮಿ ಸ್ಪರ್ಧೆ ಇಲ್ಲದಿದ್ದರೆ ಚನ್ನಪಟ್ಟಣ ಕ್ಷೇತ್ರದಿಂದ ಅಶ್ವಥ್ ಕಣಕ್ಕಿಳಿಯಲು ಬಯಸಿದ್ದರು. ಆದ್ರೀಗ ಅಶ್ವಥ್​ಗೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿರೋದ್ರಿಂದ ಹೆಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸ್ತಾರೆ ಅನ್ನೋ ಮಾತುಗಳಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.

Leave a Reply

Your email address will not be published. Required fields are marked *