ಜೆಡಿಎಸ್​ ಕಾರ್ಯಕರ್ತರ ಸಂಭ್ರಮಾಚರಣೆ

ಬಳ್ಳಾರಿ: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಬಳ್ಳಾರಿ ಜೆಡಿಎಸ್ ಕಾರ್ಯಕರ್ತರು ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ  ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಜೆಡಿಎಸ್ ಮುಖಂಡ ತಾಯಣ್ಣ ನೇತೃತ್ವದಲ್ಲಿ ಸಂಭ್ರಮಾಚರಿಸಿದರು. ಈ ವೇಳೆ ಜನಕಲ್ಯಾಣ ಯೋಜನೆಗಳು ನಮ್ಮ ಸರ್ಕಾರದಿಂದ ಬರುತ್ತವೆ ಅಂತಾ ಜೆಡಿಎಸ್ ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸಿದರು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv