ಜಾತ್ಯಾತೀತ ಶಕ್ತಿಗಳು ಒಂದಾಗುವುದು ಅನಿವಾರ್ಯ-ಜ್ಞಾನ ಪ್ರಕಾಶ ಸ್ವಾಮೀಜಿ

ಮೈಸೂರು: ಜಾತ್ಯಾತೀತ ಶಕ್ತಿಗಳ ಬಲವರ್ಧನೆಗಾಗಿ ಪ್ರಗತಿಪರ ಸಂಘಟನೆಗಳು ಚಾಮುಂಡಿ ಬೆಟ್ಟದ ಮಹಿಷಾಸುರ ಪ್ರತಿಮೆ ಬಳಿ ಪ್ರಾರ್ಥನೆ ಸಲ್ಲಿಸಿದವು. ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.

ಈ ವೇಳೆ ಮಾತನಾಡಿದ ಉರಿಲಿಂಗ ಪೆದ್ದ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ, ದೇಶವನ್ನ ಕೋಮು ಶಕ್ತಿಗಳು ಆಳುತ್ತಿವೆ. ದೇಶದಲ್ಲಿ ಆಯುಧಗಳ ಖರೀದಿ ಹೆಚ್ಚಾಗಿದೆ. ಇಂತಹ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ‌ ಮಾರಕವಾಗಿದೆ. ಜಾತ್ಯಾತೀತ ಶಕ್ತಿಗಳು ಒಂದಾಗುವ ಅನಿವಾರ್ಯತೆ ಬಂದಿದೆ ಅಂತ  ತಿಳಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv