‘ಆಪರೇಷನ್ ಕಮಲ ಮಾಡಲ್ಲ, ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ’

ಶಿವಮೊಗ್ಗ: ನಾವು ಆಪರೇಷನ್ ಕಮಲ ಮಾಡಲ್ಲ. ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿರುವ ಅವರು, ಸರಕಾರ ಬೀಳಿಸುವ ಪ್ರಯತ್ನ ಮಾಡಲ್ಲ. ನಾವು 105 ಹುಲಿಗಳು. ನಮ್ಮನ್ನು ಮುಟ್ಟುವ ಶಕ್ತಿ ಯಾರಿಗೂ ಇಲ್ಲ. ಮೈತ್ರಿನೇ ಬೇಡ ಅಂತ ಕಾಂಗ್ರೆಸ್ ಶಾಸಕರೇ ಹೇಳ್ತಾರೆ. ಕಾಂಗ್ರೆಸ್ ನಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ. ಚುನಾವಣೆ ಹೋಗೋದು. ಕೇಂದ್ರದ ಬಿಜೆಪಿ ನಾಯಕರು ತೀರ್ಮಾನ ಮಾಡ್ತಾರೆ ಎಂದು ಈಶ್ವರಪ್ಪ ಹೇಳಿದರು.

ಜಿಂದಾಲ್ ಗೆ ಭೂಮಿ ಕೊಡುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು.ಮೂರು ಬಿಟ್ಟು 3666 ಎಕರೆ ಮಾರಾಟ ಮಾಡಲು ಹೊರಟಿದ್ದಾರೆ. ನದಿ , ನೀರು, ಹೆಣ್ಣುಮಕ್ಕಳ ಬಗ್ಗೆ ಗಮನ ಕೊಡ್ತಾ ಇಲ್ಲ. ರಾಜ್ಯ ಉಳಿಸಿ. ರಾಜ್ಯ ಮಾರಾಟ ಮಾಡಬೇಡಿ. ಜಿಂದಾಲ್ ನವರು ಸಾವಿರಾರು ಕೋಟಿ ಬಾಕಿ ಕೊಡಬೇಕಿದೆ. 3666 ಎಕರೆ ₹ 30 ಕೋಟಿಗೆ ಮಾರಾಟ ಮಾಡಲು ಹೋರಟಿದ್ದರೆ. ಇದನ್ನು ಕೇಳಿ ಭಯವಾಯ್ತು‌. ಎಷ್ಟು ಆಗುತ್ತಾ ಅಷ್ಟು ಬಾಚಿಕೊಂಡು ಹೋಗಲು ಸರಕಾರ ತೀರ್ಮಾನ ಮಾಡಿದೆ. ಚುನಾವಣೆಯಲ್ಲಿ ಹೀನಾಯವಾಗಿ ಸೋತ ಮೇಲೂ ಈ ತೀರ್ಮಾನ ಕೈಗೊಂಡಿದೆ. ಇದನ್ನು ಸರ್ಕಾರ ಕ್ಯಾನ್ಸಲ್ ಮಾಡಬೇಕು. ಇಲ್ಲದಿದ್ದರೆ ಬಿಜೆಪಿ ನೇತೃತ್ವದಲ್ಲಿ ರಾಜ್ಯ ವ್ಯಾಪಿ ಹೋರಾಟ ಮಾಡಲಾಗುವುದು ಎಂದು ಕೆ.ಎಸ್‌ ಈಶ್ವರಪ್ಪ ಹೇಳಿದರು. ಮೋದಿ ಪ್ರಮಾಣ ವಚನ ಹಿನ್ನೆಲೆಯಲ್ಲಿ 30ರಂದು ಶಿವಮೊಗ್ಗದ ಪ್ರತಿ ಮನೆಗೂ ಲಾಡು ವಿತರಣೆ ಮಾಡಲಾಗುವುದು ಎಂದು ಇದೇ ವೇಳೆ ಹೇಳಿದರು.


Follow us on:

YouTube: firstNewsKannada Instagram: firstnews.tv Facebook: firstnews.tv Twitter: firstnews.tv