ಕಬಿನಿ ಜಲಾಶಯ ಭರ್ತಿಗೆ ಇನ್ನು ಕೇವಲ 7 ಅಡಿ ಮಾತ್ರ ಬಾಕಿ.!

ಮೈಸೂರು: ಈ ಬಾರಿ ನಿರೀಕ್ಷೆಗಿಂತಲೂ ಹೆಚ್ಚು ಮಳೆಯಾಗುತ್ತಿದ್ದು ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗುವ ಹಂತದಲ್ಲಿದೆ. ಮೈಸೂರಿನ ಎಚ್.ಡಿ.ಕೋಟೆಯ‌ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಗೆ ಇನ್ನು ಕೇವಲ 7 ಅಡಿ ಮಾತ್ರ ಬಾಕಿ ಇದೆ.

ಜಲಾಶಯದ ಗರಿಷ್ಟ ನೀರಿನ ಮಟ್ಟ 2284 ಅಡಿಯಾಗಿದ್ದು, ಇಂದಿನ ನೀರಿನ ಮಟ್ಟ 2277 ಅಡಿಗಳಾಗಿದೆ. ಜಲಾಶಯದ ಒಳ ಹರಿವಿನ ಪ್ರಮಾಣ 22300 ಕ್ಯೂಸೆಕ್ಸ್ ಹಾಗೂ ಹೊರ ಹರಿವಿನ ಪ್ರಮಾಣ 1000 ಕ್ಯೂಸೆಕ್ಸ್ ಆಗಿದೆ. ಇನ್ನೂ ನಾಲ್ಕು ದಿನದಲ್ಲಿ ಡ್ಯಾಂ ತುಂಬುವ ನಿರೀಕ್ಷೆಯಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ:contact@firstnews.tv