ಕಾಂಗ್ರೆಸ್ ಬಿಡುವುದಿಲ್ಲ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಬಾಳಾಸಾಹೇಬ್ ಪಾಟೀಲ್ ತಿಳಿಸಿದ್ದಾರೆ.
ಸದಾಶಿವನಗರದಲ್ಲಿ ಡಿಸಿಎಂ ಪರಮೇಶ್ವರ್ ಹಾಗೂ ಸಚಿವ ಡಿ.ಕೆ ಶಿವಕುಮಾರ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ರಾಜೀನಾಮೆ ಕೊಡುವ ಯೋಚನೆಯೇ ಇಲ್ಲ. ನಮ್ಮ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಇತ್ತು. ಈ ಬಗ್ಗೆ ಸಚಿವರ ಬಳಿ ಚರ್ಚೆ ಮಾಡಲು ಬಂದಿದ್ದೆ. ಅದು ಬಿಟ್ಟು ಬೇರೆ ಯಾವುದೇ ವಿಚಾರ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv