ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು

ಕಲಬುರಗಿ: ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಘಟನೆ ಕಲಬುರಗಿ‌ ತಾಲೂಕಿನ ಅಂಕಲಗಾ ಗ್ರಾಮದಲ್ಲಿ ಸಂಭವಿಸಿದೆ. ರಾಜಶೇಖರ್(45) ಮೃತ ರೈತ, ಅಂಕಲಗಾ ಗ್ರಾಮದಲ್ಲಿ ಜುಲೈ 1ರಂದು ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ‌ಯತ್ನಿಸಿದ್ದ. ಬಳಿಕ ಆತನನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ರಾಜಶೇಖರ್ ಸಾವನ್ನಪ್ಪಿದ್ದಾರೆ. ರಾಜಶೇಖರ್​, ಖಾಸಗಿ ಬ್ಯಾಂಕ್​ನಲ್ಲಿ 15 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದೆ. ಮಹಾಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.