ಪಾಠ ಮಾಡೋ ಶಿಕ್ಷಕನೇ ಹೀಗೆ ಮಾಡಿದ್ರೆ ಹೇಗೆ..!

ಕಲಬುರ್ಗಿ: 12 ವರ್ಷದ ಅಪ್ರಾಪ್ತ ಬಾಲಕಿಗೆ 60 ವರ್ಷದ ವೃದ್ಧ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಕಲಬುರ್ಗಿ ನಗರದ ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡಿದಿದ್ದು, ಶಾಲೆಯ ಮುಖ್ಯ ಶಿಕ್ಷಕ ಮಲ್ಲನಗೌಡ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಸಂತ್ರಸ್ತ ಬಾಲಕಿಯನ್ನ ಸರ್ಕಾರಿ ಅಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ಆರೋಪಿಯ ಮೇಲೆ ಪೋಕ್ಸೊ ಕಾಯ್ದೆಯಡಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.com