ಬೆಣ್ಣೆನಗರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ

ದಾವಣಗೆರೆ: ಜಿಲ್ಲಾಡಳಿತ ನೇತೃತ್ವದಲ್ಲಿ 63ನೇ ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. ವಿವಿಧ ಕಲಾ ತಂಡಗಳೊಂದಿಗೆ ತಾಯಿ ಭುವನೇಶ್ವರಿಯ ಮೆರವಣಿಗೆ ಮಾಡಲಾಯಿತು.
ಮೆರವಣಿಗೆ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪಿದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್ ಶ್ರೀನಿವಾಸ್, ಧ್ವಜಾರೋಹಣ ಕಾರ್ಯಕ್ರಮ ನೆರೆವೇರಿಸಿದರು. ಏಕಕಾಲಕ್ಕೆ ಪೊಲೀಸ್​​ ಬ್ಯಾಂಡ್​ನಿಂದ ರಾಷ್ಟ್ರಗೀತೆ ಹಾಗೂ ನಾಡಗೀತೆ ಹಾಡಲಾಯಿತು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ನಾಡು ನುಡಿಗಾಗಿ ಸೇವೆ ಸಲ್ಲಿಸಿದವರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಕಾಲೇಜು ಮಕ್ಕಳು, ಗಣ್ಯರು, ಕನ್ನಡಪರ ಸಂಘಟನೆಗಳು ಭಾಗಿಯಾಗಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv