ರೈತರ ಸಾಲ ಮನ್ನಾ ಆಗ್ರಹಿಸಿ ಕರವೇ ಪ್ರೊಟೆಸ್ಟ್​

ಕಲಬುರ್ಗಿ: ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೇಡಂ ತಾಲೂಕಿನ ಮುಧೋಳ ಗ್ರಾಮದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ರಾಮಚಂದ್ರ ಗುತ್ತೇದಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ರೈತರ ಸಂಪೂರ್ಣ ಸಾಲಮನ್ನಾ ಮಾಡುವಂತೆ ಸೇಡಂ‌ ತಹಶೀಲ್ದಾರ್ ಮೂಲಕ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಮನವಿ ಸಲ್ಲಿಸಿದರು.

ನಿಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂರ್ಪಕಿಸಿ:contact@firstnews.tv